*ಸಿದ್ದಾಪುರ, ಏ. 10: ಚೆಟ್ಟಳ್ಳಿ ಸಮೀಪದ ಪೊನ್ನತ್‍ಮೊಟ್ಟೆ ಎಂಬಲ್ಲಿ ಉನೈಸ್ ಎಂಬವರಿಗೆ ಸೇರಿದ ಆಟೋ ರಿಕ್ಷಾಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಯಾರೇ ಆದರೂ ಕೂಡಲೇ ಪತ್ತೆ ಹಚ್ಚಿ ಬಂಧಿಸಿ, ಶಿಕ್ಷೆಗೊಳಪಡಿಸಬೇಕೆಂದು ಜನಪರ ಹೋರಾಟ ಸಮಿತಿ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಚುನಾವಣೆ ಸಂದರ್ಭವಾಗಿದ್ದು, ಪ್ರಕರಣಕ್ಕೆ ರಾಜಕೀಯ ಲೇಪನವಾಗುವ ಮುನ್ನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.