ಬೆಂಗಳೂರು, ಏ. 10: ಕೆಆರ್‍ಸಿಎಲ್113 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಮೇ 12 ಕೊನೆಯ ದಿನವಾಗಿದೆ. ಕೊಂಕಣ ರೈಲ್ವೆ ನಿಗಮ ನಿಯಮಿತ (ಕೆಆರ್‍ಸಿಎಲ್) 55 ಸ್ಟೇಷನ್ ಮಾಸ್ಟರ್, 37 ಗೂಡ್ಸ್ ಗಾರ್ಡ್ ಸೇರಿದಂತೆ 113 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎನ್ಪಿಸಿಐಎಲ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1.7.2018ಕ್ಕೆ ಅನ್ವಯವಾಗುವಂತೆ. ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5, ಓಬಿಸಿ 3 ವರ್ಷದ ವಿನಾಯಿತಿ ಇದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡೆಬಿಟ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್ಸಿ-ಎಸ್ಟಿ, ಮಹಿಳೆ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 250 ಶುಲ್ಕ, ಉಳಿದ ವರ್ಗದ ಅಭ್ಯರ್ಥಿಗಳು ರೂ. 500 ಶುಲ್ಕ ನಿಗದಿ ಮಾಡಲಾಗಿದೆ. ಪ್ರಮುಖ ಅಂಶಗಳು * ಕೊಂಕಣ ರೈಲ್ವೆ ನಿಗಮ ನಿಯಮಿತ * ಒಟ್ಟು ಹುದ್ದೆಗಳು 113 * ಗೋವಾ, ಮಹಾರಾಷ್ಟ್ರ, ಕರ್ನಾಟಕ * ಕೊನೆಯ ದಿನಾಂಕ ಮೇ 12