ಸೋಮವಾರಪೇಟೆ, ಏ.11: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ವತಿಯಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕುಂದು ಕೊರತೆಗಳ ಸಾರ್ವಜನಿಕ ಸಭೆ ತಾ.16ರಂದು ಪಟ್ಟಣದ ಪತ್ರಿಕಾ ಭವನದಲ್ಲಿ ಬೆಳಿಗ್ಗೆ 11 ರಿಂದ 2ಗಂಟೆಯ ವರೆಗೆ ನಡೆಯಲಿದೆ ಎಂದು ಎಸಿಬಿ ಇಲಾಖಾ ಪ್ರಕಟಣೆ ತಿಳಿಸಿದೆ.

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಅಥವಾ ಸರ್ಕಾರಿ ಅಧಿಕಾರಿಗಳಿಂದ ಲಂಚ ಬೇಡಿಕೆ ಹಾಗು ಕಿರುಕುಳ, ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ದೂರುಗಳನ್ನು ಏ.16ರಂದು ಸ್ವೀಕರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ