ಮಡಿಕೇರಿ, ಏ. 10: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕು ಪಂಚಾಯಿತಿ ವತಿಯಿಂದ ತಾ. 11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಬಳಿ ಇರುವ ಎಸ್‍ಜಿಎಸ್‍ವೈ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಾ.ಪಂ. ಇಒ ಲಕ್ಷ್ಮಿ ತಿಳಿಸಿದ್ದಾರೆ.