ಸೋಮವಾರಪೇಟೆ, ಏ. 10: ಇಲ್ಲಿನ ಜೆಎಂಎಫ್‍ಸಿ ಮತ್ತು ಸಿವಿಲ್ ನ್ಯಾಯಾಲಯದ ವಕೀಲರೊಬ್ಬರ ಮೇಲೆ ಮೊಕದ್ದಮೆ ದಾಖಲಿಸಿರುವದನ್ನು ವಿರೋಧಿಸಿ ವಕೀಲರುಗಳು ಕಳೆದ 6 ದಿನಗಳಿಂದ ನಡೆಸುತ್ತಿದ್ದ ಕಲಾಪ ಬಹಿಷ್ಕಾರವನ್ನು ವಾಪಸ್ಸು ಪಡೆದುಕೊಂಡಿದ್ದಾರೆ.

ವಕೀಲರ ಸಂಘದ ಪ್ರತಿನಿಧಿಗಳು ಆಡಳಿತಾತ್ಮಕ ನ್ಯಾಯಮೂರ್ತಿ ಹಾಗೂ ಹೈಕೋರ್ಟ್ ನ್ಯಾಯಾಧೀಶರನ್ನು ಧಾರಾವಾಡದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿ, ಸಮಸ್ಯೆಯನ್ನು ಅವರ ಗಮನಕ್ಕೆ ತಂದ ಸಂದರ್ಭ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ, ಬುಧವಾರದಿಂದ ನ್ಯಾಯಾಲಯಕ್ಕೆ ಹಾಜರಾಗುತ್ತೇವೆ ಎಂದು ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ತಿಳಿಸಿದ್ದಾರೆ.