ಮಡಿಕೇರಿ, ಏ. 11: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 13 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 66/11ಕೆ.ವಿ. ಪೊನ್ನಂಪೇಟೆ, ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ವಿಎಫ್5 ಪಾಲಿಬೆಟ್ಟ ಫೀಡರ್ಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ಪಾಲಿಬೆಟ್ಟ, ಚೆನ್ನಂಗಿ, ಚೆನ್ನಯ್ಯನಕೋಟೆ, ಹಂಚಿಕಾಡು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.