ಕುಶಾಲನಗರ, ಏ. 12: ಯುವ ಬ್ರಿಗೇಡ್ ಕಾರ್ಯಕರ್ತರಿಂದ ತಾ. 13 ರಂದು (ಇಂದು) ಕುಶಾಲನಗರದಲ್ಲಿ ಕಾವೇರಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಕುಶಾಲನಗರದ ಕೊಪ್ಪ ಕಾವೇರಿ ಸೇತುವೆ ಕೆಳಭಾಗ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ನದಿ ತಟದಲ್ಲಿ ನದಿಯಿಂದ ತ್ಯಾಜ್ಯ ತೆರವುಗೊಳಿಸುವ ಕಾರ್ಯ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 6.30 ರಿಂದ ಸ್ವಚ್ಛತಾ ಕಾರ್ಯ ಪ್ರಾರಂಭಗೊಳ್ಳಲಿದೆ ಎಂದು ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ.