ಮಡಿಕೇರಿ, ಏ. 12: ಅವಿಘ್ನ ಕನ್ಸಲ್ಟಿಂಗ್ ಹಾಗೂ ಬ್ರಾಡ್‍ವೇ ಇಂಡಿಯಾ ಸಹಭಾಗಿತ್ವದಲ್ಲಿ ತಾ. 14 ರಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಮಡಿಕೇರಿ ನಗರದ ಕೊಹಿನೂರು ರಸ್ತೆಯ ಬ್ರಾಡ್‍ವೇ ಟ್ರೈನಿಂಗ್ ಅಂಡ್ ಡೆವಲಪ್‍ಮೆಂಟ್ ಸೆಂಟರ್‍ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಅಂತರ್ರಾಷ್ಟ್ರೀಯ ಕಂಪೆನಿಗಳಿಗೆ, ಮೈಸೂರು, ಬೆಂಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುವದು.
ಜಿಲ್ಲೆಯ ಉದ್ಯೋಗಾಂಕ್ಷಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ +9148943400, 8050001094, 8792779480, +91-7625086001, 08272-298765, 0821-4006662 ಸಂಪರ್ಕಿಸಬಹುದಾಗಿದೆ.