ಮಡಿಕೇರಿ, ಏ. 12: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 13 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ 66/11ಕೆವಿ ಪೊನ್ನಂಪೇಟೆ, ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೋಗುವ ವಿಎಫ್5 ಪಾಲಿಬೆಟ್ಟ ಫೀಡರ್‍ಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವದು. ಪಾಲಿಬೆಟ್ಟ, ಚೆನ್ನಂಗಿ, ಚೆನ್ನಯ್ಯನಕೋಟೆ, ಹಂಚಿಕಾಡು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.