ಮಡಿಕೇರಿ, ಏ. 27: ಕುಶಾಲನಗರ 220 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಇಂಡಸ್ಟ್ರಿಯಲ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾರ್ಯ ನಿರ್ವಹಿಸಬೇಕಿದ್ದು, ಈ ಫೀಡರ್‍ಗಳ ವಿದ್ಯುತ್ ಸರಬರಾಜಿನಲ್ಲಿ ತಾ. 29 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸ್ಥಗಿತಗೊಳಿಸಲಾಗುವದು. ಆದ್ದರಿಂದ, ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ಶಿರಂಗಾಲ ಮತ್ತು ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅವರು ಕೋರಿದ್ದಾರೆ.