ಶನಿವಾರಸಂತೆ: ಭಾರತ ಚುನಾವಣಾ ಆಯೋಗ, ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಜಿಲ್ಲಾ ಸಮಿತಿ ವತಿಯಿಂದ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ವಿದ್ಯಾಸಾಗರ ಕಲಾ ವೇದಿಕೆಯವರು ಬೀದಿ ನಾಟಕ ಪ್ರದರ್ಶಿಸಿದರು. ಕಲಾವಿದ ಈ. ರಾಜು ಮತ್ತು ತಂಡದವರು ಮತದಾನದ ಮಹತ್ವ ಕುರಿತು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು. ಜಿಲ್ಲಾ ಪಂಚಾಯಿತಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಡಿ.ಡಿ. ಪೆಮ್ಮಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ.ಎಲ್. ಧನಂಜಯ್, ಲೆಕ್ಕಾದಿಕಾರಿ ಶರಣಪ್ಪ ಸನದಿ ಇತರರು ಹಾಜರಿದ್ದರು.