ಕೂಡಿಗೆ, ಮೇ 4: ಜಿಲ್ಲೆಗೆ ಅತಿಮುಖ್ಯವಾಗಿ ಬೇಕಾಗುವಂತಹ ವೈದ್ಯಕೀಯ ಕಾಲೇಜು, ಸೈನಿಕ ಶಾಲೆ, ಆಯಾ ತಾಲೂಕುಗಳಲ್ಲಿ ಹೋಬಳಿ ವಾರು ಮೊರಾರ್ಜಿ ಶಾಲೆ ಸೇರಿದಂತೆ ಶಿಕ್ಷಣ ಮತ್ತು ಇನ್ನಿತರ ಕ್ಷೇತ್ರಗಳಿಗೆ ಅನುಕೂಲವಾಗುವ ಮಾದರಿಯಲ್ಲಿ ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಸಾಗಲು ಅನೇಕ ಯೋಜನೆಗಳನ್ನು ತರಲಾಗಿದೆ. ಇನ್ನೂ ಜಿಲ್ಲೆಯ ಅಭಿವೃದ್ಧಿಯತ್ತ ಸಾಕಷ್ಟು ಗಮನಹರಿಸುವೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಪಿ. ಅಪ್ಪಚ್ಚುರಂಜನ್ ಅವರು ಹೇಳಿದರು.

ಶಿರಂಗಾಲದಲ್ಲಿ ಮತಯಾಚನೆ ಸಂದರ್ಭ ಚುನಾವಣಾ ಪ್ರಚಾರ ಭಾಷಣಾ ಮಾಡುತ್ತಾ, ಕುಶಾಲನಗರ ಹೋಬಳಿಯ ಗಡಿಭಾಗದ ತೊರೆನೂರು, ಹೆಬ್ಬಾಲೆ, ಶಿರಂಗಾಲ ದವರೆಗೆ ಬೇಸಿಗೆ ಬೆಳೆಗೆ ನೀರೊದಗಿ ಸುವ ಸುಗ್ರೀವಾಜ್ಞೆಯನ್ನು ಜಾರಿಗೆ ತರುವದರೊಂದಿಗೆ ಈ ವ್ಯಾಪ್ತಿಯ ರೈತರಿಗೆ ಬೇಸಾಯ ಮಾಡಲು ಅನುಕೂಲ ಮಾಡಲಾಗುವದು. ಹಾರಂಗಿಯಿಂದ ಸೋಮವಾರಪೇಟೆಗೆ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಿರುವ ಮಾದರಿಯಲ್ಲಿ ಮುಳ್ಳುಸೋಗೆಯಿಂದ ಶಿರಂಗಾಲ ದವರೆಗೆ ಸಮರ್ಪಕವಾಗಿ ಕುಡಿ ಯುವ ನೀರಿನ ಯೋಜನೆಯನ್ನು ಕೈಗೊಳ್ಳಲಾಗುವದು. ಜೊತೆಗೆ ತೊರೆನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಕ್ಕಅಳುವಾರದ ಸ್ನಾತಕೊತ್ತರ ಕೇಂದ್ರದ ಸ್ಥಾಪನೆ ಯಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಉನ್ನತ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಇನ್ನೂ ಹೆಚ್ಚಿನ ಅನುದಾನ ನೀಡಿ ಪ್ರಗತಿಯತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗು ವದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ತಾಲೂಕು ಪಂಚಾಯ್ತಿ ಉಪಾಧ್ಯಕ್ಷ ಅಭಿಮನ್ಯುಕುಮಾರ್, ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವಿ. ಎಂ. ವಿಜಯ, ತಾಲೂಕು ಎಸ್‍ಟಿ ಘಟಕದ ಅಧ್ಯಕ್ಷ ಪ್ರಭಾಕರ್, ಎಸ್‍ಸಿ ಮೋರ್ಚದ ಅಧ್ಯಕ್ಷ ಕುಮಾರಸ್ವಾಮಿ, ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮಾಜಿ ಅಧ್ಯಕ್ಷ ಚಂದ್ರಪ್ಪ, ನಿರ್ದೇಶಕ ಟಿ.ಎಸ್.ಜಗದೀಶ್ ಸೇರಿದಂತೆ ತೊರೆನೂರು, ಹೆಬ್ಬಾಲೆ, ಶಿರಂಗಾಲದ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಯಕರ್ತರು ಇದ್ದರು.

ಚುನಾವಣಾ ಪ್ರಚಾರ ಸಭೆಯು ಎಂ.ಪಿ. ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಹೆಬ್ಬಾಲೆ, ತೊರೆನೂರಿ ನಲ್ಲಿ ನಡೆಯಿತು. ಈ ಸಂದರ್ಭ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ 50 ಕ್ಕೂ ಹೆಚ್ಚು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು.