ಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ. ಚಂದ್ರಕಲಾ ಪರವಾಗಿ ಕುಶಾಲನಗರದಲ್ಲಿ ಮತಯಾಚನೆ ನಡೆಸಲಾಯಿತು. ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಕಾರ್ಯಕರ್ತರು ಪಟ್ಟಣದ ಬೂತ್ ಸಂಖ್ಯೆ 167ರಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಪ್ರಮೋದ್ ಮುತ್ತಪ್ಪ, ಕರಿಯಪ್ಪ, ಪಳಂಗಪ್ಪ, ಜಯಪ್ರಕಾಶ್ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರು ಇದ್ದರು.