ಕೂಡಿಗೆ: ತೊರೆನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಹೆಬ್ಬಾಲೆ ಗ್ರಾ.ಪಂ. ಸದಸ್ಯ ಹೆಚ್.ಡಿ. ದಿನೇಶ್ ಕಾಂಗ್ರೆಸ್ ಪಕ್ಷ ತೊರೆದು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಗೊಂಡಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾ ದಳದ ಅಭ್ಯರ್ಥಿ ಜೀವಿಜಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಹೆಚ್.ಡಿ. ದಿನೇಶ್, ಶಿರಂಗಾಲದ ಶ್ರೀನಿವಾಸ್, ಅಳುವಾರದ ಧನಂಜಯ್, ಶಿವಪ್ಪ, ಸೇರಿದಂತೆ 30 ಕ್ಕೂ ಅಧಿಕ ಮುಖಂಡರು ಜೆಡಿಎಸ್ ಸೇರಿದರು. ಈ ಸಂದರ್ಭ ಶಿರಂಗಾಲ ಗ್ರಾ.ಪಂ. ಅಧ್ಯಕ್ಷ ರಮೇಶ್, ತೊರೆನೂರು ಸಹಕಾರ ಬ್ಯಾಂಕಿನ ನಿರ್ದೇಶಕ ಕೆ.ಎಸ್. ಕೃಷ್ಣೇಗೌಡ, ಶಿರಂಗಾಲ ದೇವಾಲಯ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

ಕೂಡಿಗೆ: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿ ಪಕ್ಷದ 20 ಕ್ಕೂ ಅಧಿಕ ಮುಖಂಡರು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಗೊಂಡಿದ್ದಾರೆ. ತೊರೆನೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ತೊರೆನೂರು ಬಸವೇಶ್ವರ ದೇವಾಲಯ ಸಮಿತಿಯ ಮಾಜಿ ಅಧ್ಯಕ್ಷ ಟಿ.ಡಿ. ಗೋವಿಂದ್, ವಿಕ್ರಮ್, ಮಹೇಶ್, ಬೆಳ್ಳುಳ್ಳಿ ಕುಮಾರ್ ಸೇರಿದಂತೆ 20 ಕ್ಕೂ ಅಧಿಕ ವಿವಿಧ ಪಕ್ಷದ ಮುಖಂಡರು ಜೆಡಿಎಸ್‍ಗೆ ಸೇರ್ಪಡೆಯಾದರು. ಸಭೆಯಲ್ಲಿ ತೊರನೂರು ಸಹಕಾರ ಬ್ಯಾಂಕಿನ ನಿರ್ದೇಶಕ ಕೆ.ಎಸ್. ಕೃಷ್ಣೇಗೌಡ, ಶಿರಂಗಾಲ ಗ್ರಾ.ಪಂ. ಅಧ್ಯಕ್ಷ ರಮೇಶ್, ಶಿರಂಗಾಲ ದೇವಾಲಯ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಸಿದ್ಧಲಿಂಗಪುರದ ಶುಂಠಿ ರಾಮಣ್ಣ, ಸುರೇಶ್, ದಿನೇಶ್, ಪುಟ್ಟಸ್ವಾಮಿ, ಜೆಡಿಎಸ್‍ನ ಸ್ಥಾನೀಯ ಸಮಿತಿಯ ಪದಾಧಿಕಾರಿಗಳು ಇದ್ದರು.