ಮಡಿಕೇರಿ, ಮೇ 13: ಕೊಡವ ಜನಾಂಗದ ಆಚಾರ ವಿಚಾರವನ್ನು ಉಳಿಸುವ ನಿಟ್ಟಿನಲ್ಲಿ ಕೊಡವ ಮಕ್ಕಡ ಕೂಟದಿಂದ ಆಟ್ಪಾಟ್ ಪಡಿಪು ಕಾರ್ಯಕ್ರಮ ಆಯೋಜಿಸುತ್ತಿರುವದು ಶ್ಲಾಘನೀಯ ಎಂದು ಮಡಿಕೇರಿ ಕೊಡವ ಸಮಾಜ ಕಾರ್ಯದರ್ಶಿ ಅರೆಯಡ ರಮೇಶ್ ಹೇಳಿದರು.
ತಾ. 14ರಿಂದ 25ರವರೆಗೆ ಕೊಡವ ಮಕ್ಕಡಕೂಟ ಹಾಗು ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟ ಆಯೋಜಿಸಿ ಲಾಗಿರುವ ಆಟ್ ಪಾಟ್ ಪಡಿಪು ಕಾರ್ಯಕ್ರಮಕ್ಕೆ ನಗರದ ಜನರಲ್ ತಿಮ್ಮಯ್ಯ ಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೊಡವ ಸಂಪ್ರದಾಯ ನಶಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕೊಡವ ಮಕ್ಕಡ ಕೂಟದ ವತಿಯಿಂದ ಕಳೆದ ಹಲವು ವರ್ಷಗಳಿಂದ ಮಕ್ಕಳಿಗೆ ಕೊಡವ ಜನಾಂಗದ ಸಂಸ್ಕøತಿ, ಆಚಾರ ವಿಚಾರವನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸುತ್ತಿರುವದು ಉತ್ತಮ ಬೆಳವಣಿಗೆ ಎಂದು ಹರ್ಷ ವ್ಯಕ್ತಪಡಿಸಿದರು.
ಕೊಡವ ಮಕ್ಕಡಕೂಟದ ಅಧ್ಯಕ್ಷ ಬೊಳ್ಳಜೀರ ಅಯ್ಯಪ್ಪ ಮಾತನಾಡಿ, ಸಂಘಟನೆ ವತಿಯಿಂದ ಕಳೆದ 5 ವರ್ಷಗಳಿಂದ ಆಟ್ ಪಾಟ್ ಪಡಿಪು ಕಾರ್ಯಕ್ರಮ ಆಯೋಜಿಸುವ ಮೂಲಕ ಮಕ್ಕಳಿಗೆ ಕೊಡವರ ಸಂಸ್ಕøತಿ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಮಡಿಕೇರಿ, ನಾಪೋಕ್ಲು ಮತ್ತಿತರ ಕಡೆಗಳಲ್ಲಿ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು. ಕೊಡವ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಮಾತನಾಡಿ, ಪೊಮ್ಮಕ್ಕಡ ಕೂಟದ ವತಿಯಿಂದಲೂ ಸಂಸ್ಕøತಿ ಉಳಿವಿಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಮಾತನಾಡಿ, ಜಿಲ್ಲೆಯಲ್ಲಿ ಹಲವು ಕೊಡವ ಸಂಘಟನೆಗಳಿದ್ದು, ಎಲ್ಲಾ ಸಂಘಟನೆಗಳು ಒಗ್ಗಟ್ಟಿನಿಂದ ಸಂಸ್ಕøತಿ ಉಳಿವಿಗೆ ಶ್ರಮಿಸಬೇಕು. ಅಲ್ಲದೆ, ಕೊಡವ ಸಂಸ್ಕøತಿ, ಆಚಾರ ವಿಚಾರಗಳ ಬಗ್ಗೆ ಸಾಕಷ್ಟು ಪುಸ್ತಕಗಳಿದ್ದು, ಅಂತಹ ಪುಸ್ತಕಗಳನ್ನು ಓದುವ ಮೂಲಕ ನಮಗೆ ತಿಳಿಯದ ಸಂಪ್ರದಾಯಗಳನ್ನು ಅರಿಯುವದ ರೊಂದಿಗೆ ಮುಂದಿನ ಪೀಳಿಗೆಗೆ ಸಂಸ್ಕøತಿಯನ್ನು ಉಳಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಾನಪದ ಕಲಾವಿದ ನಾಪಂಡ ಈರಪ್ಪ, ರಂಗಕರ್ಮಿ ಅಲ್ಲಾರಂಡ ವಿಠಲ್ ನಂಜಪ್ಪ, ಕೊಡವ ವiಕ್ಕಡಕೂಟದ ಕಾರ್ಯದರ್ಶಿ ಪುತ್ತರಿರಕರುಣ್ ಕಾಳಯ್ಯ ಮತ್ತಿತರರು ಉಪಸ್ಥಿತರಿದ್ದರು. ಅಧ್ಯಕ್ಷ ಬೊಳ್ಳಜೀರ ಅಯ್ಯಪ್ಪ ಸ್ವಾಗತಿಸಿ, ಚೋಕಿರ ಅನಿತಾ ನಿರೂಪಿಸಿ, ಉಳ್ಳಿಯಡ ಸಚಿತ ಗಂಗಮ್ಮ ಪ್ರಾರ್ಥಿಸಿ, ಮಾದೇಟಿರ ಪ್ರಮೀಳಾ ಜೀವನ್ ವಂದಿಸಿದರು.