ಮಡಿಕೇರಿ, ಮೇ 13:ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಮಡಿಕೇರಿ, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆ ನಡೆಸುತ್ತಿದ್ದು, ಈ ತರಬೇತಿ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ/ ಸಹಕಾರ ಇಲಾಖೆ/ ಸಹಕಾರ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು ಅವಧಿಯ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಯನ್ನು ಜುಲೈ 2 ರಿಂದ ಪ್ರಾರಂಭಿಸಲಾಗುತ್ತಿದೆ.

ತರಬೇತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ/ಸಹಕಾರ ಇಲಾಖೆ/ ಸಹಕಾರ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶ ಕಲ್ಪಿಸಲಾಗಿದೆ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿದ್ದಾರೆ. ಇಂತಹ ಅಭ್ಯರ್ಥಿಗಳು ಮಾತ್ರ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದು. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.400 ಗಳ ಶಿಷ್ಯವೇತನ ನೀಡಲಾಗುವದು.

ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 06 ತಿಂಗಳು ವಿಶೇಷ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ತರಿಸಿಕೊಳ್ಳಲಾಗುವದು ಮತ್ತು ಈ ವರ್ಗದ ಅಭ್ಯರ್ಥಿಗಳು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಮಡಿಕೇರಿ ಹಾಗೂ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು ಮೇ 31 ರೊಳಗಾಗಿ ಸಲ್ಲಿಸಬಹುದು.

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿರಬೇಕು. ವಯೋಮಿತಿ 18 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500 ಶಿಷ್ಯವೇತನವನ್ನು ನೀಡಲಾಗುವದು.

ಪ್ರಸಕ್ತ ತರಬೇತಿ ಅಧಿವೇಶನವು ಜುಲೈ 02 ರಿಂದ ಪ್ರಾರಂಭವಾಗಲಿದೆ. ಡಿ.ಸಿ.ಎಂ. ತರಬೇತಿಯ ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ತರಬೇತಿ ಸಂಸ್ಥೆಯಿಂದ ಪಡೆಯಬಹುದು. ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ.75(ರೂ. ಎಪ್ಪತ್ತೈದು ಮಾತ್ರ) ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ ಮೂಲಕ ಪಡೆಯಲು ಇಚ್ಛಿಸುವವರು ರೂ.125 (ರೂ. ಒಂದು ನೂರ ಇಪ್ಪತ್ತೈದು ಮಾತ್ರ)ಗಳ ಡಿ.ಡಿ. ಮೂಲಕ ಪಾವತಿಸಿ ಪಡೆಯಬಹುದಾಗಿದೆ.

ತರಬೇತಿಗೆ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಮಡಿಕೇರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08272-228437/ 9902189872 /9535250704 / 9449245024 ನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಪ್ರಾಂಶುಪಾಲರು ತಿಳಿಸಿದ್ದಾರೆ.