ನಾಪೆÇೀಕ್ಲು, ಮೇ 14: ನಾಪೆÇೀಕ್ಲು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಲ್ಲೇಟಿರ ಕಪ್ ಹಾಕಿ ನಮ್ಮೆಯಲ್ಲಿ ಜಭ್ಬೂಮಿ ಕೊಡವ ಸಿಡಿಯನ್ನು ಭಾಗಮಂಡಲ - ತಲಕಾವೇರಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ ಬಿಡುಗಡೆ ಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲ್ಲೇಟಿರ ಕಪ್ ಹಾಕಿ ನಮ್ಮೆಯ ಅಧ್ಯಕ್ಷ ಕುಲ್ಲೇಟಿರ ಶಂಭು ಮಾದಪ್ಪ ವಹಿಸಿದ್ದರು.
ವೇದಿಕೆಯಲ್ಲಿ ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಕುಲ್ಲೇಟಿರ ಅಜಿತ್ ನಾಣಯ್ಯ, ಮಣವಟ್ಟಿರ ದಯಾ ಕುಟ್ಟಪ್ಪ, ಕುಲ್ಲೇಟಿರ ಅರುಣ್ ಬೇಬ ಮತ್ತಿತರರು ಇದ್ದರು.