ಮಡಿಕೇರಿ, ಮೇ 20: ವೀರಾಜಪೇಟೆ ತಾಲೂಕು ಬಾಳುಗೋಡು ಗ್ರಾಮದಲ್ಲಿರುವ ಏಕಲವ್ಯ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ (ಪಿಸಿಎ0ಬಿ, ಪಿಸಿಎ0ಸಿ) ತರಗತಿಯ ದಾಖಲಾತಿಗಾಗಿ ಪರಿಶಿಷ್ಠ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾದರಿ ವಸತಿ ಕಾಲೇಜಿನಲ್ಲಿ ಬಾಲಕ-ಬಾಲಕಿಯರಿಗೆ ಪ್ರತ್ಯೇಕ ವಸತಿ ಸೌಲಭ್ಯವಿದೆ. ಊಟ, ವಸತಿ, ಪಠ್ಯ ಪುಸ್ತಕ, ಸಮವಸ್ತ್ರ ಇನಿತರ ಸೌಲಭ್ಯಗಳನ್ನು ಒದಗಿಸಲಾಗುವದು. ಆಸಕ್ತ ವಿದ್ಯಾರ್ಥಿಗಳು ನಿಗಧಿತ ನಮೊನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ತಾ. 28 ರೊಳಗೆ ಪ್ರಾಂಶುಪಾಲರು ಏಕಲವ್ಯ ಮಾದರಿ ವಸತಿ ಶಾಲೆ ಬಾಳುಗೋಡು ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9483162466, 9902499269 ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.