ಸೋಮವಾರಪೇಟೆ, ಮೇ 20: ಜಿಲ್ಲಾ ಆದಿದ್ರಾವಿಡ ಸಮಾಜದ ವಾರ್ಷಿಕ ಸಭೆ ತಾ. 21 ರಂದು (ಇಂದು) ಸ್ಥಳೀಯ ಒಕ್ಕಲಿಗರ ಸಮಾಜದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಹೋಬಳಿ ಘಟಕದ ಅಧ್ಯಕ್ಷ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಆದಿದ್ರಾವಿಡ ಸಮಾಜದ ಅಧ್ಯಕ್ಷರಾದ ಮೋಹನ್ ನೆಲ್ಲಿಗುಂಡಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಆದಿ ದ್ರಾವಿಡ ಸಮಾಜದ ಅಧ್ಯಕ್ಷರಾದ ಎಸ್.ಎಂ. ಸೋಮಪ್ಪ ವಹಿಸಲಿದ್ದಾರೆ. ವೇದಿಕೆಯಲ್ಲಿ ಸಮಾಜದ ಜಿಲ್ಲಾ ಗೌರವಾಧ್ಯಕ್ಷ ಪಿ.ಬಿ. ಬಾಬು. ಸುಳ್ಯ ಸಮಾಜದ ಗೌರವಾಧ್ಯಕ್ಷ ಕೆ.ಎಂ. ಬಾಬು, ಭದ್ರಾವತಿ ಆದಿ ದ್ರಾವಿಡ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ. ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿರುವರು.

ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ವೇದಿಕೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಬಿ.ಎ. ಜೀವಿಜಯ, ಉದ್ಯಮಿಗಳಾದ ನಾಪಂಡ ಮುತ್ತಪ್ಪ, ಹರಪಳ್ಳಿ ರವೀಂದ್ರ, ಎಸ್.ಎ. ಮುರುಳೀಧರ್, ಕವನ್ ಕಾರ್ಯಪ್ಪ ಮತ್ತಿತರರು ಉಪಸ್ಥಿತರಿರುವರು. ಇದೇ ಸಂದರ್ಭ ಸಮಾಜದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದು. ಸಮಾಜದ ಮಂಗಳೂರಿನ ಘಟಕದ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಕಕ್ಕೆಹೊಳೆ ಸಮೀಪದಿಂದ ಮೆರವಣಿಗೆಯಲ್ಲಿ ತೆರಳಿ ಬಾಣವಾರ ರಸ್ತೆಯಲ್ಲಿನ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವದು.