ಮಡಿಕೇರಿ, ಮೇ 21: ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‍ಗೆ ಬಿಜೆಪಿ ಅಭ್ಯರ್ಥಿಯಾಗಿ ಮತ್ತೊಮ್ಮೆ ಸ್ಪರ್ಧಿಸುತ್ತಿರುವ ಕ್ಯಾ|| ಗಣೇಶ್ ಕಾರ್ಣಿಕ್ ಅವರು ತಾ. 21ರಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕೊಡಗು ಜಿಲ್ಲೆಯು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯ ಎರಡು ತಾಲೂಕುಗಳಾದ ಚೆನ್ನಗಿರಿ ಹಾಗೂ ಹೊನ್ನಾಳಿಯನ್ನು ಈ ಕ್ಷೇತ್ರ ಒಳಗೊಂಡಿದೆ. ಈ ಸಂದರ್ಭ ಮಾಜಿ ಎಂ.ಎಲ್.ಸಿ. ಮೋನಪ್ಪ ಭಂಡಾರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.