ಮಡಿಕೇರಿ, ಮೇ 21: ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಕೆ.ಕೆ. ಮಂಜುನಾಥ್ ಕುಮಾರ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಕೆ.ಪಿ. ಚಂದ್ರಕಲಾ, ವಿ.ಪಿ. ಶಶಿಧರ್, ಬ್ಲಾಕ್ ಅಧ್ಯಕ್ಷ ರಮಾನಾಥ್ ಸೇರಿದಂತೆ ಮೈಸೂರು ಹಾಗೂ ಕೊಡಗಿನ ಪಕ್ಷ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.