ಮಡಿಕೇರಿ, ಮೇ 21: 2018-19 ನೇ ಸಾಲಿನ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶಾತಿಗಾಗಿ ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು ರಾಜ್ಯದ ಯಾವದೇ ಭಾಗದಿಂದ ಇಲಾಖೆಯ ವೆಬ್‍ಸೈಟ್ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ಮೂಲಕ ಅರ್ಜಿಗಳನ್ನು ಜೂನ್ 8 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08272-298357 ಸಂಪರ್ಕಿಸ ಬಹುದಾಗಿದೆ ಎಂದು ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ತಿಳಿಸಿದ್ದಾರೆ.