ಮಡಿಕೇರಿ, ಮೇ 21: ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ನಿಲಯಗಳಿಗೆ 5 ರಿಂದ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಬಾಲಕರು ಹಾಗೂ 4 ರಿಂದ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಬಾಲಕಿಯರು ಪ್ರವೇಶ ಪಡೆಯಬಹುದಾಗಿದೆ. ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಸಮವಸ್ತ್ರ, ಲೇಖನ ಸಾಮಾಗ್ರಿಗಳು ಹಾಗೂ 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೈಸಿಕಲ್ ನೀಡಲಾಗುವುದು.

ವಿದ್ಯಾರ್ಥಿ ನಿಲಯಕ್ಕೆ ಸೇರಬಯಸುವ ವಿದ್ಯಾರ್ಥಿಗಳು ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕುಶಾಲನಗರ ಮೆಟ್ರಿಕ್ ಪೂರ್ವ ಬಾಲಕರ ನಿಲಯ (9632330709), ಹೆಬ್ಬಾಲೆ ಮೆಟ್ರಿಕ್ ಪೂರ್ವ ಬಾಲಕರ ನಿಲಯ (9731331282), ಸೋಮವಾರಪೇಟೆ ಮೆಟ್ರಿಕ್ ಪೂರ್ವ ಬಾಲಕರ ನಿಲಯ (9482194195), ಕೊಡ್ಲಿಪೇಟೆ ಮೆಟ್ರಿಕ್ ಪೂರ್ವ ಬಾಲಕರ ನಿಲಯ (9740508391), ಕುಶಾಲನಗರ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ (9483648295), ಸೋಮವಾರಪೇಟೆ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ (9482194195), ಶನಿವಾರಸಂತೆ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ (9591914046) ನ್ನು ಸಂಪರ್ಕಿಸಬಹುದಾಗಿದೆ.