ಸೋಮವಾರಪೇಟೆ,ಮೇ.21: ಸಮೀಪದ ತಣ್ಣೀರುಹಳ್ಳ ಗ್ರಾಮದಲ್ಲಿ ಮನೆಗೆ ನುಗ್ಗಿರುವ ಕಳ್ಳರು ಚಿನ್ನಾಭರಣ ಕಳವು ಮಾಡಿರುವ ಘಟನೆ ನಡೆದಿದೆ.

ಗ್ರಾಮದ ನಿವಾಸಿ ಜಯಮ್ಮ ಕುಶಾಲನಗರದಲ್ಲಿರುವ ಮಗಳ ಮನೆಗೆ ತೆರಳಿದ್ದ ಸಂದರ್ಭ, ಬೀಗ ಒಡೆದಿರುವ ಕಳ್ಳರು, ಬೀರುವಿನಲ್ಲಿಟ್ಟ 1ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.