ಸೋಮವಾರಪೇಟೆ,ಮೇ.21: ಪ್ರಸಕ್ತ ಸಾಲಿನಲ್ಲಿ ಜರುಗಿದ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವವರನ್ನು ಬಿಜೆಪಿಯಿಂದ ಅಮಾನತುಗೊಳಿಸಬೇಕೆಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಂ.ಎನ್. ಕುಮಾರಪ್ಪ ಪಕ್ಷದ ಜಿಲ್ಲಾಧ್ಯಕ್ಷರಿಗೆ ಶಿಫಾರಸ್ಸು ಮಾಡಿದ್ದಾರೆ.
ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಪಿ.ಡಿ. ಮೋಹನ್ದಾಸ್, ಜಿಲ್ಲಾ ಸಮಿತಿ ಸದಸ್ಯರಾದ ರೂಪಾ ಸತೀಶ್, ವೆಂಕಪ್ಪ, ಡಿ.ಬಿ. ಧರ್ಮಪ್ಪ, ಜಿಲ್ಲಾ ಉಪಾಧ್ಯಕ್ಷ ಹೆಚ್.ಕೆ. ಮಾದಪ್ಪ, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಸಾಮಾಜಿಕ ಜಾಲತಾಣ ಅಧ್ಯಕ್ಷ ಬಿ.ಪಿ. ದಿವಾನ್, ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಎಂ.ಸಿ. ರಾಘವ, ಬೇಳೂರು ಗ್ರಾ.ಪಂ. ಮಾಜೀ ಸದಸ್ಯ ಬಿ. ಮಂಜು ಅವರುಗಳು ಕಳೆದ ತಾ. 12ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ವಿರುದ್ಧ ಕೆಲಸ ಮಾಡಿದ್ದು, ಇವರುಗಳನ್ನು ಪಕ್ಷದಿಂದ ಅಮಾನತ್ತುಗೊಳಿಸಬೇಕೆಂದು ಕುಮಾರಪ್ಪ ಜಿಲ್ಲಾಧ್ಯಕ್ಷ ಭಾರತೀಶ್ ಅವರಿಗೆ ಶಿಫಾರಸ್ಸು ಮಾಡಿದ್ದಾರೆ.