ಮಡಿಕೇರಿ, ಮೇ 22 : ಕೊಡಗು ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಮೂರನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ತಾ. 25 ರಿಂದ 27ರವರೆಗೆ ಮಾದಾಪುರದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಜಿಲ್ಲಾಧ್ಯಕ್ಷ ಎಸ್.ಜನಾರ್ಧನ ಕೊಡಗು ಜಿಲ್ಲೆಯ ಎಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಮಾದಾಪುರದ ಚೆನ್ನಮ್ಮ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ಪಂದ್ಯಾಟ, ಫುಟ್ಬಾಲ್, ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ, ಓಟದ ಸ್ಪರ್ಧೆ, ಮಹಿಳೆಯರಿಗೆ ಹಗ್ಗ ಜಗ್ಗಾಟ, ಓಟದ ಸ್ಪರ್ಧೆ ಮತ್ತು ಇತರ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, ಕ್ರಿಕೆಟ್, ಫುಟ್ಬಾಲ್ , ಕಬಡ್ಡಿ ಮತ್ತು ವಾಲಿಬಾಲ್ ಕ್ರೀಡೆಗಳಿಗೆ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಕ್ರಿಕೆಟ್ ಪಂದ್ಯಾಟ 5 ಓವರ್‍ಗಳಿಗೆ ಸೀಮಿತವಾಗಿದ್ದು, ಫುಟ್ಬಾಲ್ ಪಂದ್ಯವು 5+1 ಆಟಗಾರರದ್ದಾಗಿದ್ದು, ತಂಡಗಳಿಗೆ ಸಮವಸ್ತ್ರ ಹಾಗೂ ಶೂ ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
ಸಮಾರೋಪದಂದು ಕಳೆದ ಬಾರಿಯ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಸಮಾಜ ಬಾಂಧವರ ಮಕ್ಕಳನ್ನು ಗೌರವಿಸಲಾಗುವದು ಎಂದು ತಿಳಿಸಿದ ಅವರು, ಸಮಾಜದ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಸಂಘವು ಸಮಾಜದ ಮುಂದಿನ ಪೀಳಿಗೆಗೆ ಆಚಾರ-ವಿಚಾರವನ್ನು ತಿಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದರು.
ಸಮಾಜ ಬಾಂಧವರನ್ನು ಒಂದೇ ವೇದಿಕೆಗೆ ಕರೆತರುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ತಲೆತಲಾಂತರದಿಂದ ವಾಸವಾಗಿರುವ ಸುಮಾರು 1250ಕ್ಕೂ ಅಧಿಕ ಆದಿ ದ್ರಾವಿಡ ಕುಟುಂಬಗಳು ಇಂದಿಗೂ ಸ್ವಂತ ಸೂರು ಇಲ್ಲದೆ ತೋಟದ ಲೈನ್‍ಮನೆಗಳಲ್ಲಿ ವಾಸವಾಗಿದ್ದು, ಅವರುಗಳಿಗೆ ನಿವೇಶನ ಹಾಗೂ ಸೂರು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಶಾಸಕರುಗಳ ಸಹಕಾರದೊಂದಿಗೆ ಸಂಬಂಧಿಸಿದ ಇಲಾಖೆ ಸಚಿವರನ್ನು ಭೇಟಿ ಮಾಡಿ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಸಮಾಜದವರಿಗೆ ತಲಪಿಸಲು ಕ್ರಮವಹಿಸಲಾಗುವದು ಎಂದು ಮಾಹಿತಿ ನೀಡಿದರು.
ಆದಿ ದ್ರಾವಿಡ ಸಮಾಜ ಸೇವಾ ಸಂಘದ ಹೆಸರಿನಲ್ಲಿ ಜಿಲ್ಲೆಯಲ್ಲಿ ಎರಡು ಸಂಘಟನೆಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಂಘದ ವೀರಾಜಪೇಟೆ ತಾಲೂಕು ಅಧ್ಯಕ್ಷ ಎಸ್.ಶಿವಪ್ಪ ತಮ್ಮ ಸಂಘವು 2011ರಲ್ಲಿ ಎನ್.ಪಿ.ಓಂಕಾರಪ್ಪ ಅವರಿಂದ ಸ್ಥಾಪಿತವಾಗಿದ್ದು, 2017ರಲ್ಲಿ ಅವರು ನಿಧನರಾದ ಬಳಿಕವೂ ಸಂಘ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ 2016ಲ್ಲಿ ತಮ್ಮ ಸಂಘದೊಂದಿಗೆ ಯಾವದೇ ಸಮಾಲೋಚನೆ ನಡೆಸದೆ ಹೊಸದಾಗಿ ಸಂಘವೊಂದನ್ನು ರಚಿಸಿಕೊಂಡಿದ್ದಾರೆ. ನÀಮ್ಮ ಸಂಘವೇ ಅಧಿಕೃತ ಸಂಘವಾಗಿದ್ದು, ಸೋಮಪ್ಪ ಅವರಂತೆ ಇಂತಿಷ್ಟೇ ಹಣ ನೀಡಬೇಕೆಂದು ಬಲವಂತವಾಗಿ ಸದಸ್ಯರಿಂದ ಹಣ ಸಂಗ್ರಹ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಕ್ರೀಡಾಸಮಿತಿ ಅಧ್ಯಕ್ಷ ವಿಶ್ವನಾಥ್ ಹಾಜರಿದ್ದರು.