ಕುಶಾಲನಗರ, ಮೇ 22: ರಾಜ್ಯ ಸರಕಾರದ ಸಚಿವ ಸಂಪುಟ ರಚನೆ ಸಂದರ್ಭ ವಾಲ್ಮೀಕಿ ಜನಾಂಗದ ಮುಖಂಡ ಹಾಗೂ ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೋಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಪ್ರಮುಖರು ಆಗ್ರಹಿಸಿ ದ್ದಾರೆ.
ಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎನ್.ಅಶೋಕ್, ಕಾಂಗ್ರೆಸ್‍ನ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿರುವ ಸತೀಶ್ ಜಾರಕಿಹೊಳಿ ಎರಡು ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿ ದ್ದಾರೆ.
ಈ ಬಾರಿಯ ಸಚಿವ ಸಂಪುಟ ರಚನೆ ಸಂದರ್ಭ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕಿದೆ ಎಂದು ಆಗ್ರಹಿಸಿದರು. ಅಲ್ಲದೆ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಹಿರಿಯ ಮುತ್ಸದ್ದಿ ಹೆಚ್. ವಿಶ್ವನಾಥ್ ಅವರನ್ನು ನೇಮಕ ಮಾಡುವಂತೆ ಈ ಸಂದರ್ಭ ಮನವಿ ಮಾಡಿದರು. ಗೋಷ್ಠಿಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಎಂ. ಮಲ್ಲಪ್ಪ, ಸಂಘಟನಾ ಕಾರ್ಯದರ್ಶಿ ಕೆ. ಆರ್. ಚಂದ್ರು, ನಿರ್ದೇಶಕ ಆರ್. ಕೃಷ್ಣ, ಚಂದನ್ ಇದ್ದರು.