ನಾಪೆÇೀಕ್ಲು, ಮೇ. 22: ನಾಪೆÇೀಕ್ಲು ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ನಾಪೆÇೀಕ್ಲು ಚೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಲಾಗುವದು ಎಂದು ಜಯಕರ್ನಾಟಕ ಸಂಘಟನೆಯ ಮಡಿಕೇರಿ ತಾಲೂಕು ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ ಎಚ್ಚರಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಅವರು ಮಳೆಗಾಲ ಆರಂಭಕ್ಕೆ ಮುನ್ನವೇ ಇಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ. ಮಳೆಗಾಲ ಆರಂಭಗೊಂಡರೆ ಪರಿಸ್ಥಿತಿ ಏನಾದೀತು? ಎಂದು ಪ್ರಶ್ನಿಸಿದ ಅವರು, ಮಳೆಗಾಲಕ್ಕೆ ಮುನ್ನ ವಿದ್ಯುತ್ ತಂತಿಗಳ ಬಳಿಯಲ್ಲಿರುವ ಮರಗಳ ರೆಂಬೆ ಕಡಿಯುವ ಕೆಲಸ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.