ಶನಿವಾರಸಂತೆ, ಮೇ 22: ಗ್ರಾಂ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಧನಂಜಯ್ ಹೇಳಿದ್ದಾರೆ. ಸಾರ್ವಜನಿಕವಾಗಿ ಪ್ಲಾಸ್ಟಿಕ್ ನಿಷೇಧಿಸಿದ್ದು, ಯಾವದೇ ರೀತಿಯ ಪ್ಲಾಸ್ಟಿಕ್ ಬ್ಯಾಗ್, ತಟ್ಟೆ, ಲೋಟ, ಚಮಚ ಇತರೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡುವದನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಸೂಚಿಸಿದ್ದಾರೆ. ತಪ್ಪಿದಲ್ಲಿ ಪರಿಸರ ಸಂರಕ್ಷಣಾ ಕಾಯ್ದೆ ಸೆಕ್ಷನ್ 19 ರಡಿ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರಡಿ ರೂ. 5000 ದಂಡ ವಿಧಿಸಲಾಗುವದು ಹಾಗೂ ವರ್ತಕರ ಅಂಗಡಿ ವ್ಯಾಪಾರ ಲೈಸೆನ್ಸ್ ರದ್ದುಪಡಿಸಲಾಗುವದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.