ಮಡಿಕೇರಿ, ಮೇ 23: ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ವ್ಯಾಪ್ತಿಯ, ವಿಸ್ತರಣಾ ಶಿಕ್ಷಣ ಘಟಕ ಮಡಿಕೇರಿ ಹಾಗೂ ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮ ತಾ. 29 ರಂದು ಬೆಳಿಗ್ಗೆ 10:30 ಗಂಟೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ. ತರಬೇತಿಯು ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗೆ 08272-225539 ಸಂಪರ್ಕಿಸಬಹುದು.