ಮಡಿಕೇರಿ, ಮೇ 24: ಪ್ರಸಕ್ತ (2018-19) ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ ಸಿ.ಇ.ಟಿ. ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ನಿಗಮದಿಂದ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿ ಗೆ ಸೇರಿದ (ವಿಶ್ವಕರ್ಮ ಮತ್ತು ಉಪ ಜಾತಿಗಳನ್ನು ಹಾಗೂ ಅಲ್ಪಸಂಖ್ಯಾತರು ಮತ್ತು ಉಪಜಾತಿಗಳು, ಉಪ್ಪಾರ ಮತ್ತು ಉಪ ಜಾತಿಗಳು ಹಾಗೂ ಬೆಸ್ತ/ ಅಂಬಿಗ ಮತ್ತು ಅದರ ಉಪ ಜಾತಿಗಳನ್ನು ಹೊರತುಪಡಿಸಿ), ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2 ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ರೂ. 1 ಲಕ್ಷ ಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.
2018-19ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ.ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಿಕೊಡಲಾಗುತ್ತದೆ.
ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಿ ವೆಬ್‍ಸೈಟ್‍ನಲ್ಲಿ ಲಭ್ಯವಿರುವ Useಡಿಟಿಚಿme iಟಿಜಿಡಿಚಿ\ಜbಛಿಜಛಿಚಿಡಿivu ಮತ್ತು Pಚಿssತಿಚಿಡಿಜ ಆಃ(ಜ#098 ನ್ನು ನಮೂದಿಸಿ ಅರ್ಜಿಯನ್ನು ಆನ್‍ಲೈನ್‍ಲ್ಲಿ ಭರ್ತಿ ಮಾಡುವದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ., ಆಧಾರ್ ಕಾರ್ಡ್-ಚುನಾವಣಾ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಸಿ.ಇ.ಟಿ-ನೀಟ್ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ದಾಖಲೆಗಳನ್ನು Sಛಿಚಿಟಿ ಮಾಡಿ ಅರ್ಜಿಯೊಂದಿಗೆ ಆನ್‍ಲೈನ್‍ಲ್ಲಿ ಜೂನ್ 8 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08272-221656 ಸಂಪರ್ಕಿಸಬೇಕೆಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯ ಪ್ರವೇಶಾತಿಗಾಗಿ
ಮಡಿಕೇರಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಡಿ. ದೇವರಾಜು ಅರಸು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಮೂರ್ನಾಡು, ಪಾರಾಣೆ, ಸಂಪಾಜೆ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಮರಗೋಡು, ಮಡಿಕೇರಿ ಟೌನ್ ಇಲ್ಲಿಗೆ ಪ್ರವೇಶಾತಿಗಾಗಿ 2018-19ನೇ ಸಾಲಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಪ್ರವರ್ಗ-1, 2ಎ, 2ಬಿ, 3ಎ, 3ಬಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಪ್ರವರ್ಗ-1ರ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ. 1 ಲಕ್ಷ ಹಾಗೂ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ. 44500 ಮತ್ತು ಪ.ಜಾತಿ, ಪ.ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಆದಾಯ ಮಿತಿ ರೂ. 2 ಲಕ್ಷಗಳಾಗಿರುತ್ತದೆ.
2018-19ನೇ ಸಾಲಿಗೆ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಸಂಬಂಧ ಪಟ್ಟ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಹಾಗೂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಮಡಿಕೇರಿ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಭ್ಯರ್ಥಿಯ 4 ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕ ಮೊದಲ ಪುಟದ ಜೆರಾಕ್ಸ್ ಪ್ರತಿ, ವಾಸ ದೃಢೀಕರಣ ಪತ್ರ, ಆಧಾರ್ ಕಾರ್ಡ್‍ನ ಪ್ರತಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಹಾಗೂ ಹಿಂದಿನ ತರಗತಿಯ ದೃಢೀಕೃತ ಅಂಕಪಟ್ಟಿಯ ನಕಲುಗಳೊಂದಿಗೆ ಜೂನ್ 20 ರ ಸಂಜೆ 5 ಗಂಟೆಯೊಳಗೆ ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳ ನಿಲಯ ಮೇಲ್ವಿಚಾರಕರು ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಮಡಿಕೇರಿರವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ಹತ್ತಿರ, ಮಡಿಕೇರಿ ದೂರವಾಣಿ ಸಂಖ್ಯೆ 08272-298037, 9448205919 ನ್ನು ಸಂಪರ್ಕಿಸಬಹುದಗಿದೆ.
ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ
ವೀರಾಜಪೇಟೆ ತಾಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2018-19ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 6ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಸಲ್ಲಿಸ ಬಹುದಾಗಿರುತ್ತದೆ.
ವಿದ್ಯಾರ್ಥಿ ನಿಲಯಗಳಲ್ಲಿ ವಸತಿ, ಊಟ-ತಿಂಡಿ, ಪುಸ್ತಕ, ಸಮವಸ್ತ್ರ ಹಾಗೂ ಇತರ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಸಹ ನಿಲಯಗಳಿಗೆ ಪ್ರವೇಶ ಪಡೆಯಲು ಕೂಡ ಅರ್ಹರಾಗಿರುತ್ತಾರೆ. ನಿಲಯಗಳ ವಿವರಗಳನ್ನು ಕೆಳಗೆ ನೀಡಿದೆ. ಹೊಸದಾಗಿ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಅಥವಾ hಣಣಠಿ://ಚಿಜmissioಟಿs.ಞಚಿಡಿ.ಟಿiಛಿ.iಟಿ ಪೆÇೀರ್ಟಲ್ ಮೂಲಕ ಜೂನ್ 30 ರೊಳಗೆ ಸಲ್ಲಿಸಿ ಆನ್‍ಲೈನ್ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ಮಾಕ್ರ್ಸ್ ಕಾರ್ಡ್‍ನ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ನಿಲಯಗಳ ವಾರ್ಡನ್‍ರವರಿಗೆ ಸಲ್ಲಿಸುವಂತೆ ತಿಳಿಸಿದೆ. ಪೊನ್ನಂಪೇಟೆ, ವೀರಾಜಪೇಟೆ, ಕಾಕೋಟುಪರಂಬು ಮತ್ತು ಬಾಳೆಲೆ ಬಾಲಕರ ವಿದ್ಯಾರ್ಥಿ ನಿಲಯ ಮತ್ತು ಪೊನ್ನಂಪೇಟೆ, ವೀರಾಜಪೇಟೆ ಮತ್ತು ಪಾಲಿಬೆಟ್ಟ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅವಕಾಶವಿದೆ ಎಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಪ್ರೋತ್ಸಾಹಧನಕ್ಕೆ
ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ರೂ. 20 ಸಾವಿರ, ಪದವಿ ರೂ. 25 ಸಾವಿರ, ಸ್ನಾತಕೋತ್ತರ ಪದವಿ ರೂ. 30 ಸಾವಿರ, ಕೃಷಿ, ಪಶುಸಂಗೋಪನೆ, ಇಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ರೂ. 35 ಸಾವಿರಗಳು.
ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿ.ಯು.ಸಿ ಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಸಿ.ಬಿ.ಎಸ್.ಸಿ. ಮತ್ತು ಐ.ಸಿ.ಎಸ್.ಇ. ವತಿಯಿಂದ ನಡೆಸಲಾಗುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಬಹುಮಾನ ಹಣ ಪಡೆಯಲು ಅರ್ಹರಿರುತ್ತಾರೆ. ಪದವಿ/ಸ್ನಾತಕೋತ್ತರ ಕೃಷಿ/ ಪಶುಸಂಗೋಪನೆ /ಇಂಜಿನಿಯರಿಂಗ್/ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪಬ್ಲಿಕ್ ಪರೀಕ್ಷೆ ಇದ್ದಲ್ಲಿ ಪ್ರತಿ ವರ್ಷವೂ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮವಾಗಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.
ಈ ಕೋರ್ಸುಗಳಿಗೆ ಸೆಮಿಸ್ಟರ್ ಪದ್ಧತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮವಾಗಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಎರಡು ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿ ಪಾಸಾಗಿದ್ದರೆ ಅಂತವರು ಬಹುಮಾನ ಹಣ ಪಡೆಯಲು ಅರ್ಹರಿರುವದಿಲ್ಲ.
ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಮೇಲ್ಕಂಡ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.
ರಾಜ್ಯ-ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ/ ಯು.ಜಿ.ಸಿ.ಯಿಂದ ಮಾನ್ಯತೆ ಪಡೆದ ಡೀಮ್ಡ್ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಹರಿರುವದಿಲ್ಲ.
ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ/ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ/ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇವರಿಗೆ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಗಳು ತಿತಿತಿ.sತಿ. ಞಚಿಡಿ.ಟಿiಛಿ.iಟಿ ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಯಾವದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್ ಫ್ರೀ ದೂರವಾಣಿ ಸಂಖ್ಯೆ 9008 400078, 080-22634300, 080-22340956 ಅಥವಾ ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ದೂರವಾಣಿ ಸಂಖ್ಯೆ 08276-281115 ನ್ನು ಸಂಪರ್ಕಿಸಬಹುದಾಗಿದೆ.