ನಾಪೆÇೀಕ್ಲು, ಮೇ. 23: ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಹೋಬಳಿ ವ್ಯಾಪ್ತಿಯ ವಿವಿಧ ಶಾಲಾ ಶಿಕ್ಷಕರಿಗೆ ಜೂನ್ ತಿಂಗಳ ಕೊನೆಯ ವಾರದಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಗುವದು ಎಂದು ಹೋಬಳಿ ಘಟಕದ ಅಧ್ಯಕ್ಷ ಸಿ.ಎಸ್.ಸುರೇಶ್ ಹೇಳಿದ್ದಾರೆ.

ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ‘ಕನ್ನಡ ನಾಡು ನುಡಿ’ ವಿಷಯಕ್ಕೆ ಸಂಬಂಧಿಸಿದಂತೆ ಶಿಕ್ಷಕರ ತಿಳುವಳಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಸ್ಪರ್ಧೆಯನ್ನು ಆಯೋಜಿಸ ಲಾಗಿದ್ದು, ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ನೀಡಲಾಗುವದು ಎಂದರು. ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ನೀಡಲು ನಾಡಿನ ಸಹೃದಯರು ಮುಂದೆ ಬಂದಿದ್ದು, ವಿಶಿಷ್ಟ ರೀತಿಯಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗುವದು ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಎನ್.ಕೆ.ಪ್ರಭು ಮಾತನಾಡಿ ಕನ್ನಡ ಭಾಷೆಯ ಬಗ್ಗೆ ಯುವ ಜನರಲ್ಲಿ ಅಭಿಮಾನ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದತ್ತಿನಿಧಿಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಹೋಬಳಿ ಘಟಕವನ್ನು ಬಲಪಡಿಸಲಾಗುವದು ಎಂದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರ ಬೊಪ್ಪೆರ ಸಿ.ಕಾವೇರಪ್ಪ, ಖಜಾಂಚಿ ಮನ್ಸೂರ್ ಅಲಿ, ಸಹ ಕಾರ್ಯದರ್ಶಿ ಉಷಾರಾಣಿ, ಮಣವಟ್ಟಿರ ದಯ ಚಿಣ್ಣಪ್ಪ, ಕುಡಿಯರ ಮುತ್ತಪ್ಪ, ಆನಂದ ಸ್ವಾಮಿ, ಶಿಕ್ಷಕರಾದ ಮಹಂತೇಶ್ ಎಸ್.ಕೋಠಿ, ಧರ್ಮೇಂದ್ರ, ಗ್ರಾಮ ಪಂಚಾಯಿತಿ ಸದಸ್ಯೆ ಚೀಯಕಪೂವಂಡ ಮುತ್ತುರಾಣಿ ಅಚ್ಚಪ್ಪ, ಸುಬ್ರಮಣಿ ಮತ್ತಿತರರು ಇದ್ದರು.