ಚೆಟ್ಟಳ್ಳಿ, ಮೇ 23: ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಭದ್ರಕಾಳಿ ಹಾಗೂ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೇಡು ನಮ್ಮೆ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.
ಊರು ತಕ್ಕರಾದ ಚಮ್ಮಟೀರ ಕುಟುಂಬದ ಮನೆಯಿಂದ ಮೂಲ ನಿವಾಸಿಗಳಲ್ಲಿ ಒಬ್ಬರಾದ ಪಣಿಕ ಜನಾಂಗದಿಂದ ‘ಪೆÇಲವಂದೆರೆ’ ಹೊರಡುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಚಾಲನೆ ನೀಡಲಾಯಿತು. ಊರಿನ ದೇವರ ನೆಲೆ ಪೆÇಲವಪ್ಪಂಡ ಕೋಟದಲ್ಲಿ ಊರಿನ ಜನರು, ಹೆಂಗಸರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದೇವರಿಗೆ ಪೂಜೆಸಲ್ಲಿಸಿ ಹರಕೆ ಕಾಣಿಕೆಯನ್ನು ಅರ್ಪಿಸಿದರು. ಚಮ್ಮಟೀರ ಹಾಗೂ ಮತ್ತೊಬ್ಬರು ಮೂಕಳೇರ ಕೊಡವ ಪೂಜಾರಿಗಳು ದೇವರ ಕೆರೆಯಲ್ಲಿ ಸ್ನಾನ ಮಾಡಿ ವಿವಿಧ ವಿಧಿ ವಿಧಾನದೊಂದಿಗೆ ಭಂಡಾರ ಪೆಟ್ಟಿಗೆ ಶುದ್ಧಿಗೊಳಿಸಿ ನಂತರ ಕೆರೆಯ ಹತ್ತಿರದಲ್ಲಿ ಹೊಸ ಮಣ್ಣಿನ ಮಡಿಕೆಯಲ್ಲಿ ಭತ್ತವನ್ನು ಬೇಯಿಸಿ ಹದಗೊಳಿಸಿ ಕುಟ್ಟಿ ಅವಲಕ್ಕಿಯನ್ನು ಮಾಡಿ ದೇವರಿಗೆ ನೈವೇಧ್ಯ ತಯಾರು ಮಾಡಲಾಯಿತು.
ಈ ಇಬ್ಬರು ಪೂಜಾರಿಗಳು ಪೊಲವಪ್ಪಂಡ ಕೋಟ ಪ್ರವೇಶಿಸಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿ ನೆರೆದ ಭಕ್ತರಿಗೆ ಅವಲಕ್ಕಿಗೆ ಬಾಳೆ ಹಣ್ಣು ಸೇರಿಸಿ ಅವುಲ್ ಪ್ರಸಾದವಾಗಿ ನೀಡಲಾಯಿತು. ವಿಶೇಷ ಪೂಜೆಯ ನಂತರ ಸಂಜೆಯಾಗುತ್ತಿದ್ದಂತೆÀ ಗುಂಡಿಯತ್ ಅಯ್ಯಪ್ಪ ದೇವಸ್ಥಾನಕ್ಕೆ ತಕ್ಕಮುಖ್ಯಸ್ಥರು ಊರಿನವರು ದೇವಸ್ಥಾನದ ಸುತ್ತ ಶುಚಿಗೊಳಿಸಿ ವಿಶೇಷ ಪೂಜೆ ಸಲ್ಲಿಸಿ ನೈವೇದ್ಯ ಸಲ್ಲಿಸಲಾಯಿತು. ವಿಶೇಷ ಪೂಜೆಯ ನಂತರ ಈಡುಕಾಯಿಯನ್ನು ್ಲ ಭಕ್ತರು ಒಡೆದು ಹರಕೆ ತೀರಿಸಿದರು. ತೆಂಗಿನ ಕಾಯಿ, ಬಾಳೆಹಣ್ಣಿÂನ ಪ್ರಸಾದವನ್ನು ತಿನ್ನುವ ಮೂಲಕ ಪೂಜಾರಿಗಳು ಉಪವಾಸವನ್ನು ಅಂತ್ಯಗೊಳಿಸಿದರು.
ಚಮ್ಮಟೀರ ಹಾಗೂ ಮೂಕಳೇರ ಮನೆಯಿಂದ ಒಂದೊಂದು ಬೆತ್ತದ ಕೃತಕ ಕುದುರೆ ಹಾಗೂ ಮೊಗವನ್ನು ಶೃಂಗರಿಸಿ ಅದನ್ನು ಹೊತ್ತು ಸುಮಾರು 3 ಗಂಟೆಯ ಬಳಿಕ ಊರಿನ ಪ್ರಮುಖ ದೇವಾಲಯವಾದ ಭದ್ರಕಾಳಿ ದೇವಸ್ಥಾನದ ಹತ್ತಿರದ ಅಂಬಲದಲ್ಲಿ ಸೇರಿ, ಎರಡು ಕಡೆಯಿಂದ ತಲಾ ಒಂದೊಂದು ಬೆತ್ತದ ಕೃತಕ ಕುದುರೆ ಹೊತ್ತವರು ಹಾಗೂ ಮೊಗ ಮುಖಾಮುಖಿ ಆಗುತ್ತಿದ್ದಂತೆ ಪರಸ್ಪರ ಊರಿನವರು ಆಲಂಗಿಸಿಕೊಂಡು ಅಂಬಲದ ಸಮೀಪದ ದೇವರ ಕೆರೆಯಿಂದ ಕೆಸರನ್ನು ತಂದು ಪರಸ್ಪರ ಕೆಸರು ಎರಚಾಡಿಕೊಳ್ಳುವದು ಇಲ್ಲಿನ ವಿಶೇಷವಾಗಿದೆ. ಹಿರಿಯರು - ಕಿರಿಯರು, ಮಕ್ಕಳು ಎಂಬ ಭೇದವಿಲ್ಲದೆ ಪರಸ್ಪರ ಕೆಸರು ಎರಚಾಡಿ ಅಲಂಗಿಸಿಕೊಂಡು ಭದ್ರಕಾಳಿ ದೇವಸ್ಥಾನದಲ್ಲಿ ಸೇರಿ ಮೂರು ಸುತ್ತು ಬಂದು ಕಾಣಿಕೆ ಹಾಕುವ ಮೂಲಕ ಹಬ್ಬಕ್ಕೆ ತೆರೆ ಎಳೆಯಲಾಯಿತು.
-ಪುತ್ತರಿರ ಕರುಣ್ ಕಾಳಯ್ಯ