ಮಡಿಕೇರಿ, ಮೇ. 23: ಪ್ರಸಕ್ತ (2018-19) ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ ಮತ್ತು ಕೆಪಿಎಸ್‍ಸಿಯ ಅರ್ಹತಾ ಮತ್ತು ಮುಖ್ಯ ಪರೀಕ್ಷೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳು ವೆಟ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಆನ್‍ಲೈನ್ ನಲ್ಲಿ ಜೂನ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಅಥವಾ ಕಚೇರಿ ದೂರವಾಣಿ ಸಂಖ್ಯೆ 08272-225528/220214 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ.ಎಂ. ಪ್ರಕಾಶ್ ತಿಳಿಸಿದ್ದಾರೆ.