ಮಡಿಕೇರಿ, ಮೇ 23: ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್1 ರಾಜಾಸೀಟ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸ ಬೇಕಾಗುವದರಿಂದ ತಾ. 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು.

ರಾಜಾಸೀಟ್, ಹೊಸಬಡಾವಣೆ, ಇಂದಿರಾನಗರ, ಚಾಮುಡೇಶ್ವರಿನಗರ, ಡೈರಿ ಫಾರಂ, ವಿದ್ಯಾನಗರ, ಸುಬ್ರಮಣಿ ನಗರ, ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಕೋರಿದ್ದಾರೆ.