ಕುಶಾಲನಗರ, ಮೇ 24: ಜಾತ್ಯತೀತ ಜನತಾದಳದ ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾದ ಮಾಜಿ ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಮಾಜಿ ಉಪಾಧ್ಯಕ್ಷ ಎಸ್.ಎಲ್. ಬೋಜೇಗೌಡ ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತಯಾಚನೆ ನಡೆಸಿದರು.

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಅಭ್ಯರ್ಥಿಯಾದ ಬೋಜೆಗೌಡ ಕೊಡಗು ಜಿಲ್ಲಾ ಜೆ.ಡಿ.ಎಸ್.ನ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮುಂದಾಳತ್ವದಲ್ಲಿ ಕೊಡಗಿನ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಮತಯಾಚನೆ ನಡೆಸಿದರು.

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಬೋಜೇಗೌಡ ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಬಂದವರಾಗಿದ್ದು ಪ್ರಸ್ತುತ ಜೆ.ಡಿ.ಎಸ್. ಪಕ್ಷದ ರಾಜ್ಯ ವಕ್ತಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಕರು ಮತ್ತು ಶಿಕ್ಷಕರ ಕ್ಷೇತ್ರದ ಅನೇಕ ಸಮಸ್ಯೆಗಳು ಜೀವಂತವಾಗಿದ್ದು ಮುಂದೆ ಆಯ್ಕೆಯಾದ ನಂತರ ಸಮಸ್ಯೆ ಪರಿಹಾರಕ್ಕೆ ವಿಶೇಷ ಗಮನಹರಿಸುವದಾಗಿ ಬೋಜೇಗೌಡ ತಿಳಿಸಿದರು.

ಮತಯಾಚನೆ ಸಂದರ್ಭ ಕೊಡಗು ಜಿಲ್ಲಾ ಜೆ.ಡಿ.ಎಸ್.ನ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ, ವೀರಾಜಪೇಟೆ ಕ್ಷೇತ್ರ ಅಧ್ಯಕ್ಷ ಎಸ್.ಹೆಚ್. ಮತೀನ್ ವೀರಾಜಪೇಟೆ ನಗರ ಅಧ್ಯಕ್ಷ ಮಂಜುನಾಥ್, ಯುವ ಜೆ.ಡಿ.ಎಸ್. ಅಧ್ಯಕ್ಷ ಅಮ್ಮಂಡ ವಿವೇಕ್, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಜಯಮ್ಮ, ಕುಶಾಲನಗರ ನಗರ ಅಧ್ಯಕ್ಷ ಆನಂದ್ ಮುಂತಾದವರು ಹಾಜರಿದ್ದರು.