ಕುಶಾಲನಗರ, ಮೇ 23: ಕೊಡಗು ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹೃದಯ ತಜ್ಞ ಡಾ. ಶಿವರಾಂ ನಾಯಕ್ (63) ತಾ. 23ರಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜಿಲ್ಲೆಯ ಕುಶಾಲನಗರ, ಸುಂಟಿಕೊಪ್ಪ ಹಾಗೂ ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಡಾ. ಶಿವರಾಂ ನಾಯಕ್ ನಿವೃತ್ತಿ ನಂತರ ಕುಶಾಲನಗರದ ಬಸಪ್ಪ ಬಡಾವಣೆಯಲ್ಲಿ ನೆಲೆಸಿದ್ದರು.

ಮೃತರು ಇಬ್ಬರು ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದು, ತಾ. 24ರಂದು (ಇಂದು) ಕುಶಾಲನಗರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.