ಶನಿವಾರಸಂತೆ, ಮೇ 23: ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಶನಿವಾರಸಂತೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎನ್. ದೇವರಾಜ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಮೈಸೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಹೇಮಲತಾ ಅವರಿಗೆ ಎಚ್.ಎನ್. ದೇವರಾಜ್ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾವೇರಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಜಿ.ಎಂ. ಹೂವಯ್ಯ, ರಾಜಶೇಖರ್ ಇತರರು ಹಾಜರಿದ್ದರು.