ಮಡಿಕೇರಿ, ಮೇ. 23 : ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಮಹಾಸಭೆ ಮೇ 25 ರಂದು ಬೆಳಿಗ್ಗೆ 10.30 ಗಂಟೆಗೆ ಪತ್ರಿಕಾ ಭವನದಲ್ಲಿ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಆರ್. ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖಜಾಂಚಿ ರೆಜಿತ್‍ಕುಮಾರ್ ಲೆಕ್ಕಪತ್ರ ಮಂಡಿಸಲಿದ್ದಾರೆ. ಉಪಾಧ್ಯಕ್ಷ ವಿಘ್ನೇಶ್ ಭೂತನಕಾಡು ಕಳೆದ ಸಾಲಿನ ವಾರ್ಷಿಕ ಮಹಾಸಭೆ ವರದಿ ವಾಚಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಆರ್. ಸುಬ್ರಮಣಿ ವಾರ್ಷಿಕ ವರದಿ ಮಂಡಿಸಲಿದ್ದಾರೆ. ಮಹಾಸಭೆ ಬಳಿಕ ಸದಸ್ಯರಿಗೆ ಮನರಂಜನಾ ಸ್ಪರ್ಧೆ ಆಯೋಜಿಸಲಾಗಿದೆ.