ಕೂಡಿಗೆ, ಮೇ 24: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದ ರಾಜ ಎಂಬವರ ಪುತ್ರ ಚೇತನ್ (25) ಎಂಬಾತ ತಮ್ಮ ತೋಟದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕ ಜೆಸಿಬಿ ಚಾಲಕನಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕುಶಾಲ ನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.