ಮಡಿಕೇರಿ, ಮೇ. 23: ಪ್ರಸಕ್ತ (2018-19) ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಾಂಗ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಟ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಆನ್‍ಲೈನ್ ನಲ್ಲಿ ಅರ್ಜಿ ಡೌನ್‍ಲೊಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಾಖಲೆ ಗಳೊಂದಿಗೆ ಜೂನ್ 30ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ. goಞಜom.ಞಚಿಡಿ.ಟಿiಛಿ.iಟಿ ಅಥವಾ ಕಚೇರಿ ದೂರವಾಣಿ ಸಂಖ್ಯೆ 08272-225528/220214 ಅನ್ನು ಸಂಪರ್ಕಿಸಬಹ್ಮದಾಗಿದೆ.