ಭಾಗಮಂಡಲ, ಮೇ 25: ಭಾರತ ಸರ್ಕಾರದ ಖಾದಿ ಗ್ರಾಮೋದ್ಯೋಗ ಆಯೋಗ ಮತ್ತು ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘ, ಭಾಗಮಂಡಲ ಇವರ ಜಂಟಿ ಆಶ್ರಯದಲ್ಲಿ ಭಾಗಮಂಡಲ ಜೇನು ಕೃಷಿ ತರಬೇತಿ ಕೇಂದ್ರದಲ್ಲಿ ತಾ. 28ರಂದು ಬೆಳಿಗ್ಗೆ 10 ಗಂಟೆಗೆ ಜೇನು ಕೃಷಿ ಬಗ್ಗೆ ಮಾಹಿತಿ ಶಿಬಿರ ಮತ್ತು ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ.