ನಾಪೆÇೀಕ್ಲು, ಮೇ 25: ಬಿಎಸ್‍ಎನ್‍ಎಲ್ ಸಂಸ್ಥೆಯು ಸಮರ್ಪಕವಾಗಿ ಕಾರ್ಯನಿರ್ವ ಹಿಸದಿರುವ ಹಿನ್ನೆಲೆ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಯಾಗಿದೆ. ಕೂಡಲೇ ಸಂಸ್ಥೆಯ ಮೇಲಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಗ್ರಾಹಕರ ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಸಂಸ್ಥೆಯ ಕಚೇರಿಗೆ ಮುತ್ತಿಗೆ ಹಾಕಲಾಗುವದು ಎಂದು ಕಕ್ಕಬೆಯ ಗ್ರಾಮಸ್ಥರಾದ ಕಲ್ಯಾಟಂಡ ರಘು ತಮ್ಮಯ್ಯ, ಅರುಣಾ, ಕೆ.ಎ. ಮಹಮ್ಮದ್ ಹಾಜಿ, ಅರೆಯಡ ಗಿರೀಶ್ ಎಚ್ಚರಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಅವರು, ಕಕ್ಕಬೆ ದೂರವಾಣಿ ಸಂಪರ್ಕ ಕೇಂದ್ರದಲ್ಲಿ ಸಿಬ್ಬಂದಿಗಳೇ ಇರುವದಿಲ್ಲ. ಈ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುವ ಕಾರಣ ವಿದ್ಯುತ್ ಇಲ್ಲದ ಸಮಯದಲ್ಲಿ ಜನರೇಟರ್ ಬಳಸಲಾಗುತ್ತಿಲ್ಲ. ಆದ ಕಾರಣ ನೆಟ್‍ವರ್ಕ್ ಸಮಸ್ಯೆ ಉಂಟಾಗುತ್ತದೆ. ಇಂಟರ್‍ನೆಟ್ ಸಮಸ್ಯೆಯಿಂದ ಸ್ಥಳೀಯ ಬ್ಯಾಂಕುಗಳಲ್ಲಿ ವ್ಯವಹಾರ ನಡೆಸಲಾಗುತ್ತಿಲ್ಲ. ಇದರಿಂದ ಬ್ಯಾಂಕ್ ಉದ್ಯೋಗಿಗಳು ಮತ್ತು ಗ್ರಾಹಕರ ನಡುವೆ ಮನಸ್ತಾಪ ಉಂಟಾಗುತ್ತಿದೆ. ಇಂಟರ್‍ನೆಟ್ ದುರಸ್ತಿಗೆ ಬ್ಯಾಂಕ್ ನವರೇ ತಂತ್ರಜ್ಞರನ್ನು ಕರೆಸುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಈ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.