ಶನಿವಾರಸಂತೆ, ಮೇ 26: ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾರಣ ಏರ್ಪಡಿಸಲಾಗಿದ್ದ ಮೆರವಣಿಗೆ ಹಾಗೂ ವಿಜಯೋತ್ಸವದಲ್ಲಿ ಸುರಿದ ಮಳೆಯಲ್ಲೂ ಪಾಲ್ಗೊಂಡು ಶಾಸಕ ಅಪ್ಪಚ್ಚು ರಂಜನ್ ಮಾತನಾಡಿದರು.

ಕರ್ನಾಟಕದ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿದ್ದರಿಂದ 104 ಸ್ಥಾನ ಗಳಿಸಲು ಸಾಧ್ಯವಾಯಿತು ಎಂದರು.

ತಾಲೂಕು ಪಂಚಾಯಿತಿ ಸದಸ್ಯ ಅಭಿಮನ್ಯುಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯೆ ಸರೋಜಮ್ಮ, ಪ್ರಮುಖರಾದ ಭರತ್ ಕುಮಾರ್ ವಿಜಯ್, ಯತೀಶ್, ಎಸ್.ಎನ್. ರಘು, ಕೆ.ಟಿ. ಜಗದೀಶ್, ವಿನೂತ್ ಶಂಕರ್ ಇತರ ಕಾರ್ಯಕರ್ತರು ಹಾಜರಿದ್ದರು.