ವೀರಾಜಪೇಟೆ, ಮೇ 26: ಅಖಿಲ ಭಾರತ ವೀರಶೈವ ಮಹಾಸಭಾದ ವೀರಾಜಪೇಟೆ ತಾಲೂಕು ಘಟಕದ 2018ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಬಸವ ಜಯಂತಿ ಕಾರ್ಯಕ್ರಮ ತಾ. 27ರಂದು (ಇಂದು) ಅರಮೇರಿ ಕಳಂಚೇರಿ ಮಠದಲ್ಲಿ ನಡೆಯಲಿದೆ. ಬೆಳಿಗ್ಗೆ 10:30 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.

ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳ ದಿವ್ಯ ಸಾನಿಧÀ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಾವಡಗೆರೆಯ ಓಂ ಶ್ರೀ ಗುರುಲಿಂಗ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿಗಳು ಮುಖ್ಯ ಆಹ್ವಾನಿತರಾಗಿರುತ್ತಾರೆ.

ಅಖಿಲ ಭಾರತ ವೀರಶೈವ ಮಹಾಸಭಾದ ವೀರಾಜಪೇಟೆ ತಾಲೂಕು ಅಧ್ಯಕ್ಷ ಕೆ.ಎನ್.ಸಂದೀಪ್ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾಧ್ಯಕ್ಷ ಬಿ.ಡಿ. ಧರ್ಮಪ್ಪ, ಜಿಲ್ಲಾ ಕಾರ್ಯದರ್ಶಿ ಎಸ್. ಮಹೇಶ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಸ್.ಸುರೇಶ್ ಮತ್ತು ಕಾಂತರಾಜ್ ಅತಿಥಿಗಳಾಗಿರುತ್ತಾರೆ.

ವೀರಶೈವ ಸಮಾಜ ಬಾಂಧವರಿಗೆ ಆಟೋಟ ಸ್ಪರ್ಧೆ, ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದವರಿಗೆ ಸನ್ಮಾನ ನಡೆಯಲಿದೆ.

ಈ ಸಂದರ್ಭದಲ್ಲಿ ಸಭಾದ ತಾಲೂಕು ಘಟಕದ ಕಛೇರಿಯ ಉದ್ಘಾಟನೆಯೂ ನಡೆಯಲಿದೆ.