ಮಡಿಕೇರಿ, ಮೇ 29: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷ-ಸದಸ್ಯರ ನೇಮಕಾತಿಯನ್ನು ಸರಕಾರ ರದ್ದುಗೊಳಿಸಿದೆ.ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಿಗಮ ಮಂಡಳಿ ಹಾಗೂ ಅಕಾಡೆಮಿಗಳ ನೇಮಕಾತಿಯನ್ನು ರದ್ದು ಮಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆದೇಶ ಹೊರಡಿಸಿದ್ದು, ಈ ಆದೇಶದ ಹಿನ್ನೆಲೆಯಲ್ಲಿ ಕೊಡಗಿಗೆ ಸಂಬಂಧಿಸಿದಂತೆ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾಗಿದ್ದ ಟಿ.ಪಿ. ರಮೇಶ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿದ್ದ ಪದ್ಮಿನಿ ಪೊನ್ನಪ್ಪ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಪೊನ್ನಪ್ಪ ಹಾಗೂ ಸದಸ್ಯರು, ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಂ ಮತ್ತು ಸದಸ್ಯರುಗಳು ತಮ್ಮ ಸ್ಥಾನಗಳನ್ನು ಕಳೆದುಕೊಳ್ಳಲಿದ್ದಾರೆ.ಸರಕಾರದ ಮುಂದಿನ ಆದೇಶದವರೆಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನದಲ್ಲಿ ಸಂಬಂಧಿಸಿದ ಇಲಾಖೆಗಳ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಅಪರ ಕಾರ್ಯದರ್ಶಿಗಳು ಮುಂದುವರೆಯಲಿದ್ದಾರೆ.