ಮಡಿಕೇರಿ, ಮೇ 29: ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೀರಾಜಪೇಟೆಯ ಕೂರ್ಗ್ ದಂತ ವಿಜ್ಞಾನಗಳ ಕಾಲೇಜು ಸಹಯೋಗದಲ್ಲಿ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾ. 31 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಾಯಿ ಕ್ಯಾನ್ಸರ್ ತಪಾಸಣಾ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ.ಶಿವಕುಮಾರ್ ತಿಳಿಸಿದ್ದಾರೆ.