ಮಡಿಕೇರಿ, ಮೇ 28: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಜೂನ್ 1 ರಂದು ಬೆಳಿಗ್ಗೆ 9.30 ಗಂಟೆಯಿಂದ ನೇತ್ರ ತಜ್ಞ ಡಾ. ಸಿ.ಆರ್. ಪ್ರಶಾಂತ್ ಅವರ ನೇತೃತ್ವದಲ್ಲಿ ಮದೆನಾಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

ರೋಟರಿ ಮಿಸ್ಟಿಹಿಲ್ಸ್, ವಿನೋದ್ ಮೆಡಿಕಲ್ಸ್, ಮಡಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿಯಂತ್ರಣ ವಿಭಾಗ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮದೆನಾಡು ಇವುಗಳ ಸಹಕಾರದೊಂದಿಗೆ ಶಿಬಿರ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಕೋರಿದ್ದಾರೆ.