ಕೂಡಿಗೆ, ಮೇ 29: ಹುದುಗೂರು ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ 28ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಮಹಾ ಮೃತ್ಯುಂಜಯ ಯಜ್ಞ ನಡೆಸಲಾಯಿತು.
ಶನಿವಾರ ಬೆಳಿಗ್ಗೆಯಿಂದಲೇ ಕಲಶ ಪೂಜೆ, ಗಣಪತಿ ಹೋಮ ನಂತರ ಮೃತ್ಯುಂಜಯ ಯಜ್ಞ ಹಾಗೂ ಕಳಶಾಭಿಷೇಕ, ಅಲಂಕಾರ ಪೂಜೆ, ಮಹಾಮಂಗಳಾರತಿ ಸಿ.ಕೆ. ಸಜಿ ಪಣಿಕ್ಕರ್ ಅವರ ನೇತೃತ್ವದಲ್ಲಿ ನಡೆಯಿತು.
ಯಜ್ಞದಲ್ಲಿ ಕುಶಾಲನಗರ ಹೋಬಳಿ ವ್ಯಾಪ್ತಿಯ ಕೂಡಿಗೆ, ಕೂಡುಮಂಗಳೂರು, ಹಾರಂಗಿ, ಹುದುಗೂರು, ದೊಡ್ಡತ್ತೂರು, ಚಿಕ್ಕತ್ತೂರು ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಶ್ರೀ ಉಮಾ ಮಹೇಶ್ವರ ದೇವಾಲಯಕ್ಕೆ ಹೂವು ಮತ್ತು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಚಾಮಿ, ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿ ಸರ್ವ ಸದಸ್ಯರು, ಮಹಿಳಾ ಘಟಕದ ಸದಸ್ಯರು, ಗ್ರಾಮಸ್ಥರು ಇದ್ದರು.