ಮಡಿಕೇರಿ, ಮೇ 28: ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರು, ಹಿರಿಯ ನಾಗರಿಕರಿಗಾಗಿ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳಾದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಣೆ ಎನ್‍ಜಿಒಗಳ ಮೂಲಕ, ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ಯೋಜನೆ, ವಿಕಲಚೇತರಿಗೆ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನ, ಸಾಧನ ಸಲಕರಣೆ ಯೋಜನೆ, ವಿಕಲಚೇತನರ ಸ್ವಯಂ ಉದ್ಯೋಗ, ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ಮಹಿಳೆಗೆ ಜನಿಸುವ ಮಕ್ಕಳ ಶಿಶುಪಾಲನಾ ಭತ್ಯೆ, ನಿರಾಮಯ ಯೋಜನೆ, ಯಂತ್ರ ಚಾಲಿತ ತ್ರಿಚಕ್ರ ವಾಹನ ಯೋಜನೆ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ಪ್ರೋತ್ಸಾಹ ಧನ ಯೋಜನೆ, ಸ್ಪರ್ಧಾ ಚೇತನ, ನಿರುದ್ಯೋಗ ಭತ್ಯೆ, ಸಾಧನೆ ಪ್ರತಿಭೆ, ಎಸ್.ಎಸ್.ಎಲ್.ಸಿ. ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸ್ವಾವಲಂಬನ್ ವಿಮಾ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ. 08272-222830 ಹಾಗೂ ಕಚೇರಿ ಸಂಖ್ಯೆ. 222829ಕ್ಕೆ ಕರೆ ಮಾಡಿ ಮಾಹಿತಿಗಳನ್ನು ಪಡೆಯಬಹುದಾಗಿದೆ. ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯದ ಮುಂಭಾಗ, ಕೋಟೆ ಆವರಣ, ಮಡಿಕೇರಿ, ಕೊಡಗು ಜಿಲ್ಲೆ ಈ ಕಛೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.